ಮುಂಬೈ: ಆಸ್ಟ್ರೇಲಿಯಾ ವಿರುದ್ದ ಏಕದಿನ ಮತ್ತು ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಆದರೆ ಇಲ್ಲಿದೆ ಒಂದು ಟ್ವಿಸ್ಟ್.
ಏಕದಿನ ನಾಯಕತ್ವದಿಂದ ರೋಹಿತ್ ಶರ್ಮಾಗೆ ಕೊಕ್ ನೀಡಲಾಗಿದ್ದು ಶುಭಮನ್ ಗಿಲ್ ಗೆ ನಾಯಕತ್ವ ನೀಡಲಾಗಿದೆ. ಹೀಗಾಗಿ ರೋಹಿತ್ ಇನ್ನು ಕೇವಲ ಆಟಗಾರನಾಗಿ ಮುಂದುವರಿಯಲಿದ್ದಾರೆ. ಇನ್ನು ಮತ್ತೊಬ್ಬ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯೂ ಕಮ್ ಬ್ಯಾಕ್ ಮಾಡುತ್ತಿದ್ದಾರೆ.
ಟಿ20, ಟೆಸ್ಟ್ ತಂಡಕ್ಕೆ ಆಯ್ಕೆಯಾಗದೇ ಬೇಸರದಲ್ಲಿದ್ದ ಶ್ರೇಯಸ್ ಅಯ್ಯರ್ ಗೆ ಏಕದಿನ ತಂಡದಲ್ಲಿ ಸ್ಥಾನ ಸಿಕ್ಕಿದೆ. ಏಕದಿನ ತಂಡಕ್ಕೆ ಗಿಲ್ ನಾಯಕರಾದರೆ ಟಿ20 ತಂಡಕ್ಕೆ ಸೂರ್ಯಕುಮಾರ್ ಯಾದವ್ ನಾಯಕರಾಗಿದ್ದಾರೆ. ಅಕ್ಟೋಬರ್ 19 ರಿಂದ 25 ರವರೆಗೆ ಏಕದಿನ ಸರಣಿ ನಡೆಯಲಿದೆ. ಅಕ್ಟೋಬರ್ 29 ರಿಂದ ನವಂಬರ್ 8 ರವರೆಗೆ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳೂ ಆಸ್ಟ್ರೇಲಿಯಾದ ವಿವಿಧ ತಾಣಗಳಲ್ಲಿ ನಡೆಯಲಿದೆ. ಉಳಿದಂತೆ ತಂಡ ಇಲ್ಲಿದೆ.