ದ.ಆಫ್ರಿಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗಿಲ್ಲ ನಾಯಕತ್ವದ ಪಟ್ಟ

ಸೋಮವಾರ, 9 ಮಾರ್ಚ್ 2020 (09:06 IST)
ಮುಂಬೈ: ದ.ಆಫ್ರಿಕಾ ವಿರುದ್ಧ ಮಾರ್ಚ್ 12 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ.


ಈ ಸರಣಿಗೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ ಕೆಎಲ್ ರಾಹುಲ್ ಗೆ ನಾಯಕತ್ವ ನೀಡಬಹುದು ಎಂದು ಊಹಾಪೋಹಗಳಿತ್ತು. ಆದರೆ ಕೊಹ್ಲಿ ವಿಶ್ರಾಂತಿ ಪಡೆಯದೇ ಇರುವುದರಿಂದ ಅವರೇ ನಾಯಕರಾಗಿ ಮುಂದುವರಿದಿದ್ದಾರೆ.

ಇನ್ನು ಗಾಯಗೊಂಡ ರೋಹಿತ್ ಶರ್ಮಾ ಗೈರಾಗಲಿದ್ದಾರೆ. ಆದರೆ ಶಿಖರ್ ಧವನ್, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಉಳಿದಂತೆ ತಂಡ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ಪೃಥ್ವಿ ಶಾ, ಮನೀಶ್ ಪಾಂಡೆ, ಶ್ರೇಯಸ್ ಐಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ನವದೀಪ್ ಸೈನಿ, ಕುಲದೀಪ್ ಯಾದವ್ ಮತ್ತು ಶಬ್ನಂ ಗಿಲ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ