ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಕೊಕ್, ಸಂಜು ಸ್ಯಾಮ್ಸನ್ ಇನ್

Krishnaveni K

ಮಂಗಳವಾರ, 30 ಏಪ್ರಿಲ್ 2024 (16:02 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು ಕೆಎಲ್ ರಾಹುಲ್ ಗೆ ಕೊಕ್ ನೀಡಲಾಗಿದ್ದು, ನಿರೀಕ್ಷೆಯಂತೇ ಸಂಜು ಸ್ಯಾಮ್ಸನ್ ಅವಕಾಶ ಪಡೆದಿದ್ದಾರೆ.

ರೋಹಿತ್ ಶರ್ಮಾ ನೇತೃತ್ವದಲ್ಲಿ 14 ಸದಸ್ಯರ ತಂಡವನ್ನು ಆಯ್ಕೆ ಸಮಿತಿ ಪ್ರಕಟಿಸಿದೆ. ಜೊತೆಗೆ ನಾಲ್ವರು ಮೀಸಲು ಆಟಗಾರರನ್ನೂ ಹೆಸರಿಸಿದೆ. ನಿರೀಕ್ಷೆಯಂತೇ ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಸಂಜು ಸ್ಯಾಮ್ಸನ್ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

ರಸ್ತೆ ಅಪಘಾತದಿಂದಾಗಿ ಬಹಳ ತಿಂಗಳಿನಿಂದ ಟೀಂ ಇಂಡಿಯಾದಿಂದ ದೂರವಾಗಿದ್ದ ರಿಷಬ್ ಪಂತ್ ಕಮ್ ಬ್ಯಾಕ್ ಮಾಡಿದ್ದಾರೆ. ಜೊತೆಗೆ ಯಜುವೇಂದ್ರ ಚಾಹಲ್ ಗೂ ಅಚ್ಚರಿಯ ಅವಕಾಶ ನೀಡಲಾಗಿದೆ. ಹಿರಿಯ ಆಟಗಾರ ವಿರಾಟ್ ಕೊಹ್ಲಿ ಕೂಡಾ ಸ್ಥಾನ ಪಡೆದಿದ್ದಾರೆ. ಹಾರ್ದಿಕ್ ಪಾಂಡ್ಯ ಆಯ್ಕೆ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಆದರೆ ಅವರು ಉಪನಾಯಕನಾಗಿ ಆಯ್ಕೆಯಾಗಿ ಅಚ್ಚರಿ ಮೂಡಿಸಿದ್ದಾರೆ.

ಉಳಿದಂತೆ ಟೀಂ ಇಂಡಿಯಾ ಇಂತಿದೆ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಷ್ ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಆಟಗಾರರು: ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಆವೇಶ್ ಖಾನ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ