ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು ಮೂವರು ಕನ್ನಡಿಗರಿಗೆ ತಂಡದಲ್ಲಿ ಅವಕಾಶ ಸಿಕ್ಕಿದೆ.
ಅಕ್ಟೋಬರ್ 2 ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್ ಸರಣಿ ಆರಂಭವಾಗಲಿದೆ. ಅಹಮದಾಬಾದ್ ಮತ್ತು ದೆಹಲಿಯಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಗೆ 15 ಸದಸ್ಯರ ಭಾರತ ತಂಡ ಪ್ರಕಟವಾಗಿದೆ.
ತಂಡದಲ್ಲಿ ನಿರೀಕ್ಷೆಯಂತೇ ಕರುಣ್ ನಾಯರ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಆದರೆ ಉಳಿದಂತೆ ಮೂವರು ಕನ್ನಡಿಗರಿಗೆ ಅವಕಾಶ ಸಿಕ್ಕಿದೆ. ಕೆಎಲ್ ರಾಹುಲ್, ದೇವದತ್ತ ಪಡಿಕ್ಕಲ್ ಮತ್ತು ಪ್ರಸಿದ್ಧ ಕೃಷ್ಣ ಈ ಮೂವರು ಕನ್ನಡಿಗರು. ಮೊಹಮ್ಮದ್ ಶಮಿ ಮತ್ತು ಶ್ರೇಯಸ್ ಅಯ್ಯರ್ ರನ್ನು ಮತ್ತೆ ಕಡೆಗಣಿಸಲಾಗಿದೆ. ಗಾಯಗೊಂಡಿದ್ದ ರಿಷಭ್ ಪಂತ್ ಇನ್ನೂ ಚೇತರಿಸದ ಕಾರಣ ತಂಡಕ್ಕೆ ಆಯ್ಕೆಯಾಗಿಲ್ಲ. ಶುಭಮನ್ ಗಿಲ್ ನಾಯಕರಾಗಿರುವ ತಂಡಕ್ಕೆ ರವೀಂದ್ರ ಜಡೇಜಾ ಉಪನಾಯಕರಾಗಿದ್ದಾರೆ.
ಉಳಿದಂತೆ ತಂಡ ಇಂತಿದೆ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ತ ಪಡಿಕ್ಕಲ್, ಧ್ರುವ ಜ್ಯುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ ಮತ್ತು ಎನ್ ಜಗದೀಸನ್ (ವಿಕೆಟ್ ಕೀಪರ್).