ವಿಂಡೀಸ್ ಟಿ20 ಸರಣಿಗೆ ಟೀಂ ಇಂಡಿಯಾ: ಕೊಹ್ಲಿ ಔಟ್, ಅಶ್ವಿನ್ ಇನ್
ಗುರುವಾರ, 14 ಜುಲೈ 2022 (15:49 IST)
ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಅನುಭವಿ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಿ, ರವಿಚಂದ್ರನ್ ಅಶ್ವಿನ್ ಗೆ ಅವಕಾಶ ನೀಡಲಾಗಿದೆ.
ರೋಹಿತ್ ಶರ್ಮಾ ತಂಡದ ನಾಯಕತ್ವ ವಹಿಸಲಿದ್ದಾರೆ. ಕೊಹ್ಲಿ ಜೊತೆಗೆ ಜಸ್ಪ್ರೀತ್ ಬುಮ್ರಾಗೂ ವಿಶ್ರಾಂತಿ ನೀಡಲಾಗಿದೆ. ಇನ್ನು, ಗಾಯದಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಕೆಎಲ್ ರಾಹುಲ್, ಕುಲದೀಪ್ ಯಾದವ್ ಫಿಟ್ನೆಸ್ ನೋಡಿಕೊಂಡು ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ.
ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷ್ ದೀಪ್ ಸಿಂಗ್.
ಕುಲದೀಪ್ ಯಾದವ್ ಮತ್ತು ಕೆಎಲ್ ರಾಹುಲ್ ಫಿಟ್ನೆಸ್ ಪಾಸ್ ಆದರೆ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ.