137 ರನ್`ಗಳಿಗೆ ಆಸ್ಟ್ರೇಲಿಯಾ ಆಲೌಟ್: ಭಾರತದ ಗೆಲುವಿಗೆ 106 ರನ್ ಗುರಿ
ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್`ನಲ್ಲಿ ಕೇವಲ 137 ರನ್`ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಭಾರತಕ್ಕೆ ಕೇವಲ 106 ರನ್`ಗಳ ಗೆಲುವಿನ ಗುರಿ ಸಿಕ್ಕಿದೆ.
ಉಮೇಶ್ ಯಾದವ್, ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಉರುಳಿಸುವ ಮೂಲಕ ಆಸ್ಟ್ರೇಲಿಯಾಗೆ ಸಿಂಹ ಸ್ವಪ್ನವಾಗಿ ಕಾಡಿದರು.