Team India: ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸಿಕ್ತು 58 ಕೋಟಿ ಹಣ: ಯಾಕೆ ಇಲ್ಲಿದೆ ವಿವರ

Krishnaveni K

ಗುರುವಾರ, 20 ಮಾರ್ಚ್ 2025 (12:15 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರಿಗೆ ಬಿಸಿಸಿಐ 58 ಕೋಟಿ ರೂ. ಹಣ ಬಹುಮಾನವಾಗಿ ಘೋಷಿಸಿದೆ. ಯಾಕೆ ಎಂಬುದಕ್ಕೆ ಇಲ್ಲಿದೆ ಕಾರಣ.

ಇತ್ತೀಚೆಗಷ್ಟೇ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಗೆದ್ದುಕೊಂಡಿತ್ತು. ಪಾಕಿಸ್ತಾನ ಆತಿಥ್ಯದಲ್ಲಿ ನಡೆದಿದ್ದ ಟೂರ್ನಿಯನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. ಈ ಸಾಧನೆಗೆ ಟೀಂ ಇಂಡಿಯಾಗೆ ಬಿಸಿಸಿಐ ಭರ್ಜರಿ ಗಿಫ್ಟ್ ನೀಡಿದೆ.

ಈ ಬಹುಮಾನ ಮೊತ್ತ ಆಟಗಾರರು ಮಾತ್ರವಲ್ಲದೆ, ಸಹಾಯಕ ಸಿಬ್ಬಂದಿ, ತರಬೇತುದಾರರಿಗೂ ಸೇರಲಿದೆ. ಈ ಹಿಂದೆ ಟಿ20 ವಿಶ್ವಕಪ್ ಗೆದ್ದಾಗಲೂ ಬಿಸಿಸಿಐ ಟೀಂ ಇಂಡಿಯಾಗೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಿತ್ತು.

ವಿಶೇಷವೆಂದರೆ ಚಾಂಪಿಯನ್ಸ್ ಟ್ರೋಫಿ ಗೆದ್ದು ಚಾಂಪಿಯನ್ ಆದ ತಂಡಕ್ಕೆ ನೀಡಲಾದ ಬಹುಮಾನ ಮೊತ್ತಕ್ಕಿಂತಲೂ ದುಪ್ಪಟ್ಟು ಬಹುಮಾನ ಮೊತ್ತ ಇದಾಗಿದೆ. ಆಗಲೂ ಕೋಚ್ ಮತ್ತು ಸಹಾಯಕ ಸಿಬ್ಬಂದಿಗಳೂ ಬಹುಮಾನ ಮೊತ್ತ ವಿತರಿಸಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ