ಬಾಂಗ್ಲಾ ವಿರುದ್ಧ ವೈಟ್ ವಾಶ್ ಗೆಲುವಿನೊಂದಿಗೆ ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ

ಭಾನುವಾರ, 24 ನವೆಂಬರ್ 2019 (14:12 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ಮೊದಲ ಹೊನಲು ಬೆಳಕು ಟೆಸ್ಟ್ ಹಾಗೂ ಸರಣಿಯ ಎರಡನೇ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಹಾಗೂ 46 ರನ್ ಗಳಿಂದ ಗೆದ್ದುಕೊಂಡ ಟೀಂ ಇಂಡಿಯಾ ಹೊಸ ಇತಹಾಸ ಬರೆದಿದೆ.


ದ್ವಿತೀಯ ಇನಿಂಗ್ಸ್ ನಲ್ಲಿ ಬಾಂಗ್ಲಾ 195 ರನ್ ಗಳಿಗೆ ಆಲೌಟ್ ಆಗಿದೆ. ಭಾರತ ಪ್ರಥಮ ಇನಿಂಗ್ಸ್ ನಲ್ಲಿ 9 ವಿಕೆಟ್ ನಷ್ಟಕ್ಕೆ 347 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು.  ಭಾರತದ ಪರ ಮೊದಲ ಇನಿಂಗ್ಸ್ ನಲ್ಲಿ ಐದು ವಿಕೆಟ್ ಪಡೆದಿದ್ದ ಇಶಾಂತ್ ಶರ್ಮಾ ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ಕಬಳಿಸಿದರೆ, ಉಮೇಶ್ ಯಾದವ್ ದ್ವಿತೀಯ ಇನಿಂಗ್ಸ್ ನಲ್ಲಿ 5 ವಿಕೆಟ್ ಪಡೆದರು.

ಈ ಮೂಲಕ ಭಾರತ ಸತತ ನಾಲ್ಕು ಪಂದ್ಯಗಳಲ್ಲಿ ಇನಿಂಗ್ಸ್ ಅಂತರದ ಗೆಲುವು ಸಾಧಿಸಿ ಇದುವರೆಗೆ ಯಾವ ತಂಡವೂ ಮಾಡದ ಸಾಧನೆ ಮಾಡಿತು.  ಜತೆಗೆ ಸತತ ಮೂರು ಟೆಸ್ಟ್ ಸರಣಿಗಳನ್ನು ವೈಟ್ ವಾಶ್ ಮಾಡಿದ ಹೆಮ್ಮೆ ಭಾರತದ್ದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ