ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆಯಾಗಲಿದೆಯಂತೆ
ಅದರಲ್ಲೂ ಮುಖ್ಯವಾಗಿ ವಿಕೆಟ್ ಕೀಪಿಂಗ್ ನಲ್ಲಿ ವೈಫಲ್ಯ ಅನುಭವಿಸಿರುವ ದಿನೇಶ್ ಕಾರ್ತಿಕ್ ಬದಲಿಗೆ ಯುವ ಕ್ರಿಕೆಟಿಗ ರಿಷಬ್ ಪಂತ್ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಇನ್ನು, ವೇಗಿ ಜಸ್ಪ್ರೀತ್ ಬುಮ್ರಾ ಫಿಟ್ ಆಗಿ ಮರಳಿರುವುದರಿಂದ ಉಮೇಶ್ ಯಾದವ್ ಬದಲಿಗೆ ಅವರು ಸ್ಥಾನ ಪಡೆಯಲಿದ್ದಾರೆ. ಆದರೆ ಅವರಿಗಾಗಿ ತಂಡದಲ್ಲಿ ಕುಲದೀಪ್ ಯಾದವ್ ಸ್ಥಾನ ಬಿಟ್ಟುಕೊಡಬೇಕಾಗಿ ಬರಬಹುದು. ಆರಂಭಿಕ ಸ್ಥಾನದಲ್ಲಿ ಶಿಖರ್ ಧವನ್ ಮತ್ತೆ ತಂಡಕ್ಕೆ ಮರಳಿದರೂ ಅಚ್ಚರಿಯಿಲ್ಲ.