ಮಳೆ ಕಾಟದ ನಡುವೆ ಏಕದಿನ ಸರಣಿ ಸೋತ ಟೀಂ ಇಂಡಿಯಾ
ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಕಂಡಿತ್ತು. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 80 ರನ್ ಗಳಿಸುವಷ್ಟರಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾಗಿತ್ತು. ಇದೀಗ ಮೂರನೇ ಪಂದ್ಯದ ಎರಡನೇ ಇನಿಂಗ್ಸ್ ವೇಳೆ ಮಳೆ ಸುರಿಯಲಾರಂಭಿಸಿದ್ದು, ಪಂದ್ಯ ರದ್ದಾಗಿದೆ.
ಇಂದಿನ ಪಂದ್ಯದಲ್ಲಿ ಮತ್ತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 47.3 ಓವರ್ ಗಳಲ್ಲಿ 219 ರನ್ ಗಳಿಸಲಷ್ಟೇ ಶಕ್ತವಾಯಿತು. ಮಧ್ಯಮ ಕ್ರಮಾಂಕ ಸಂಪೂರ್ಣ ವೈಫಲ್ಯ ಅನುಭಸಿತು. ಶ್ರೇಯಸ್ ಅಯ್ಯರ್ 49 ವಾಷಿಂಗ್ಟನ್ ಸುಂದರ್ 51 ರನ್ ಗಳಿಸಿ ತಂಡಕ್ಕೆ ಗೌರವಯುತ ಮೊತ್ತ ಗಳಿಸಲು ನೆರವಾದರು. ಇಂದೂ ಸಂಜು ಸ್ಯಾಮ್ಸನ್ ಅವಕಾಶ ಪಡೆಯಲಿಲ್ಲ. ಈ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ಮಳೆ ಬರುವಾಗ 18 ಓವರ್ ಆಟ ಪೂರ್ಣಗೊಳಿಸಿ 1 ವಿಕೆಟ್ ನಷ್ಟಕ್ಕೆ 104 ರನ್ ಗಳಿಸಿ ಸುಸ್ಥಿಯಲ್ಲಿತ್ತು. ಒಂದು ವೇಳೆ ಮಳೆ ಬಾರದೇ ಹೋಗಿದ್ದರೂ ಈ ಪಂದ್ಯವನ್ನು ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುತ್ತಿತ್ತು.