ಖಾತೆ ತೆರೆಯುವ ಮೊದಲೇ ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ

ಶನಿವಾರ, 13 ಫೆಬ್ರವರಿ 2021 (09:44 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಭಾರತೀಯರ ಬ್ಯಾಟಿಂಗ್ ಹುಳುಕು ಬಟಾ ಬಯಲಾಗಿದೆ. ಖಾತೆ ತೆರೆಯುವ ಮೊದಲೇ ಶಬ್ನಂ ಗಿಲ್ ವಿಕೆಟ್ ಕಳೆದುಕೊಂಡು ಟೀಂ ಇಂಡಿಯಾ ಸಂಕಷ್ಟಕ್ಕೀಡಾಗಿದೆ.


ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಶಬ್ನಂ 3 ಎಸೆತ ಎದುರಿಸಿ ಓಲೀ ಸ್ಟೋನ್ ಗೆ ವಿಕೆಟ್ ಒಪ್ಪಿಸಿದ್ದಾರೆ. ಇದೀಗ ರೋಹಿತ್ ಶರ್ಮಾ ಮತ್ತು ಚೇತೇಶ್ವರ ಪೂಜಾರ ಖಾತೆ ತೆರೆಯದೇ ಕ್ರೀಸ್ ನಲ್ಲಿದ್ದಾರೆ. ಭಾರತ ರನ್ ಇಲ್ಲದೇ 1 ವಿಕೆಟ್ ಕಳೆದುಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ