ವೈರಲ್ ಆಯ್ತು ಟೀಂ ಇಂಡಿಯಾ ಹುಡುಗರ ವಿಕ್ಟರಿ ಡ್ಯಾನ್ಸ್

ಸೋಮವಾರ, 3 ಫೆಬ್ರವರಿ 2020 (09:45 IST)
ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಖುಷಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಕುಣಿದು ಕುಪ್ಪಳಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿದೆ.


ವಿಜಯದ ಬಳಿಕ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್ ಮತ್ತು ಶ್ರೇಯಸ್ ಐಯರ್ ವಿಶಿಷ್ಟವಾಗಿ ನರ್ತಿಸಿದ ವಿಡಿಯೋ ಈಗ ವೈರಲ್ ಆಗಿದೆ.

ಟೀಂ ಇಂಡಿಯಾ ಈ ಟಿ20 ಸರಣಿಯನ್ನು 5-0 ಅಂತರದಿಂದ ತನ್ನದಾಗಿಸಿಕೊಂಡಿದೆ. ಇನ್ನು, ಏಕದಿನ ಸರಣಿ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ