ಆಸ್ಟ್ರೇಲಿಯಾ ಮೇಲೆ ಫಾಲೋ ಆನ್ ಹೇರಿದ ಟೀಂ ಇಂಡಿಯಾ

ಭಾನುವಾರ, 6 ಜನವರಿ 2019 (11:49 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನವೂ ಮಂದ ಬೆಳಕಿನ ಕಾರಣದಿಂದ ಆಟ ಬೇಗನೇ ಸ್ಥಗಿತಗೊಂಡಿದೆ.


ಮೊದಲ ಇನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 300 ರನ್ ಗಳಿಗೆ ಆಲೌಟ್ ಆಗುವ ಮೂಲಕ 322 ರನ್ ಗಳ ಹಿನ್ನಡೆ ಅನುಭವಿಸಿತು. ಇದಾದ ಬಳಿಕ ಭಾರತ ಆಸೀಸ್ ಮೇಲೆ ಫಾಲೋ ಆನ್ ಹೇರಿತು. ಇದಾದ ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಆಸೀಸ್ ವಿಕೆಟ್ ನಷ್ಟವಿಲ್ಲದೇ 6 ರನ್ ಗಳಿಸಿದೆ.

ಆಸ್ಟ್ರೇಲಿಯಾದ ಮೊದಲ ಇನಿಂಗ್ಸ್ ನಲ್ಲಿ ಕುಲದೀಪ್ ಯಾದವ್  5 ವಿಕೆಟ್ ಗಳ ಗೊಂಚಲು ಪಡೆದರು. ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಮತ್ತು ಜಸ್ಪ್ರೀತ್ ಬುಮ್ರಾ 1 ವಿಕೆಟ್ ಪಡೆದರು. ಆಸ್ಟ್ರೇಲಿಯಾ ಭಾರತದ ಮೊದಲ ಇನಿಂಗ್ಸ್ ಮೊತ್ತಕ್ಕಿಂತ ಇನ್ನೂ 316 ರನ್ ಗಳ ಹಿನ್ನಡೆಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ