ವಿಶ್ವಕಪ್ ಬೆನ್ನಲ್ಲೇ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡಲು ಸಿದ್ಧವಾದ ಟೀಂ ಇಂಡಿಯಾ

ಮಂಗಳವಾರ, 15 ನವೆಂಬರ್ 2022 (08:40 IST)
ವೆಲ್ಲಿಂಗ್ಟನ್: ವಿಶ್ವಕಪ್ ನಲ್ಲಿ ಸೆಮಿಫೈನಲ್ ಸೋಲಿನ ನಿರಾಸೆ ಬೆನ್ನಲ್ಲೇ ಟೀಂ ಇಂಡಿಯಾ ಮತ್ತೊಂದು ಸರಣಿಗೆ ಮುಂದಾಗಿದೆ.

ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಈ ಸರಣಿ ನ್ಯೂಜಿಲೆಂಡ್ ನಲ್ಲಿ ನಡೆಯಲಿದ್ದು, ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ವಿಶ್ವಕಪ್ ನಲ್ಲಿ ಆಡಿದ್ದ ಪ್ರಮುಖರಿಗೆ ವಿಶ್ರಾಂತಿ ನೀಡಲಾಗಿದ್ದು, ಯುವ ಆಟಗಾರರು ಈ ಟೂರ್ನಿಯಲ್ಲಿ ಆಡಲಿದ್ದಾರೆ.

ವಿಶೇಷವೆಂದರೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸಹಿತ ಸಹಾಯಕ ಸಿಬ್ಬಂದಿಗಳಿಗೂ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನದಲ್ಲಿ ವಿವಿಎಸ್ ಲಕ್ಷ್ಮಣ್ ಹಂಗಾಮಿ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.  ನವಂಬರ್ 18 ರಿಂದ ಸರಣಿ ಆರಂಭವಾಗಲಿದ್ದು, ಭಾರತ ತಂಡ ಇಲ್ಲಿಗೆ ಬಂದಿಳಿದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ