1985-86 ರ ಬಳಿಕ ಟೀಂ ಇಂಡಿಯಾ ಈ ದಾಖಲೆ ಮಾಡುತ್ತಿರುವುದು ಇದೇ ಮೊದಲು!

ಭಾನುವಾರ, 27 ಡಿಸೆಂಬರ್ 2020 (12:45 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವಿನೂತನ ದಾಖಲೆ ಬರೆದಿದೆ. ಅದೂ 1985-86 ನೇ ಸಾಲಿನ ಬಳಿಕ ಈ ದಾಖಲೆಯನ್ನು ಇದೇ ಮೊದಲ ಬಾರಿಗೆ ಮಾಡಿದೆ.


ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ನಲ್ಲೂ ಟೀಂ ಇಂಡಿಯಾ ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸಿತ್ತು. ಇದೀಗ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಗಳಿಸಿದೆ. ಈ ರೀತಿ ಸತತವಾಗಿ ಎರಡು ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಮುನ್ನಡೆ ಗಳಿಸಿದ ದಾಖಲೆಯನ್ನು 1985 ರ ಬಳಿಕ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಮಾಡುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ