ಬಾಂಗ್ಲಾ ವಿರುದ್ಧ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಶ್ರೇಯಾಂಕದಲ್ಲಿ ಏರಿಕೆ ಕಂಡ ಟೀಂ ಇಂಡಿಯಾ
ಟೀಂ ಇಂಡಿಯಾ ನೀಡಿದ್ದ 513 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದ ಬಾಂಗ್ಲಾ ದ್ವಿತೀಯ ಇನಿಂಗ್ಸ್ ನಲ್ಲಿ 324 ರನ್ ಗಳಿಗೆ ಆಲೌಟ್ ಆಗಿತ್ತು. ಅಕ್ಸರ್ ಪಟೇಲ್ 4, ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಕಬಳಿಸಿದ್ದ ಕುಲದೀಪ್ ಯಾದವ್ 3 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಟೀಂ ಇಂಡಿಯಾ ಭರ್ಜರಿ ಗೆಲುವು ಕಂಡಿತು. ಕುಲದೀಪ್ ಯಾದವ್ ಪಂದ್ಯ ಶ್ರೇಷ್ಠರಾದರು.
ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ 7 ಗೆಲುವುಗಳೊಂದಿಗೆ ಎರಡನೇ ಸ್ಥಾನಕ್ಕೇರಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಡುವ ಕನಸು ಜೀವಂತವಾಗಿರಬೇಕಾದರೆ ಟೀಂ ಇಂಡಿಯಾ ಇನ್ನು ಕನಿಷ್ಠ ನಾಲ್ಕು ಟೆಸ್ಟ್ ಪಂದ್ಯವನ್ನು ಗೆಲ್ಲಬೇಕಿದೆ.