ಹರಿಣಗಳ ಕಂಗೆಡಿಸಿದ ಟೀಂ ಇಂಡಿಯಾ ಬೌಲರ್ ಗಳು

ಶುಕ್ರವಾರ, 4 ಅಕ್ಟೋಬರ್ 2019 (12:06 IST)
ವಿಶಾಖಪಟ್ಟಣ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ತೃತೀಯ ದಿನ ಊಟದ ವಿರಾಮದ ವೇಳೆಗೆ ಆಫ್ರಿಕಾ 4 ವಿಕೆಟ್ ಕಳೆದುಕೊಂಡು 153 ರನ್ ಗಳಿಸಿದೆ.

 

ಮೊದಲ ಇನಿಂಗ್ಸ್ ನಲ್ಲಿ ಭಾರತ 7 ವಿಕೆಟ್ ಗೆ 502 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ್ದ ಹರಿಣಗಳು ನಿನ್ನೆಯ ದಿನದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 39 ರನ್ ಗಳಿಸಿ ಸಂಕಷ್ಟದಲ್ಲಿದ್ದರು.

 

ಆದರೆ ಇಂದು ಕೊಂಚ ಚೇತರಿಕೆಯ ಆಟವಾಡಿದ ಹರಿಣಗಳು 1 ವಿಕೆಟ್ ಕಳೆದುಕೊಂಡಿದ್ದಾರೆ. ನಾಯಕ ಫಾ ಡು ಪ್ಲೆಸಿಸ್ 48 ರನ್ ಗಳಿಸಿ ಆಡುತ್ತಿದ್ದಾರೆ. ಆರ್ ಅಶ್ವಿನ್ 2 ವಿಕೆಟ್ ಕಿತ್ತರೆ ಜಡೇಜಾ 1 ವಿಕೆಟ್ ಕಬಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ