Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Krishnaveni K

ಮಂಗಳವಾರ, 6 ಮೇ 2025 (15:16 IST)
ಮುಂಬೈ: ಐಪಿಎಲ್ ಮುಗಿದ ಬೆನ್ನಲ್ಲೇ ಭಾರತ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲು ತೆರಳಲಿದ್ದು, ಈ ಪ್ರವಾಸಕ್ಕೆ ಟೀಂ ಇಂಡಿಯಾ ನಾಯಕತ್ವದ ಮೇಲೆ ಮತ್ತೊಬ್ಬ ಆಟಗಾರ ಕಣ್ಣಿಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಟೀಂ ಇಂಡಿಯಾ ಟೆಸ್ಟ್ ಮತ್ತು ಏಕದಿನ ತಂಡಗಳಿಗೆ ರೋಹಿತ್ ಶರ್ಮಾ ಅವರೇ ನಾಯಕರಾಗಿದ್ದಾರೆ. ಇಂಗ್ಲೆಂಡ್ ಸರಣಿಗೆ ಭವಿಷ್ಯದ ದೃಷ್ಟಿಯಿಂದ ನಾಯಕತ್ವ ಬದಲಾವಣೆ ಮಾಡುತ್ತಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ.

ಆದರೆ ಮೂಲಗಳ ಪ್ರಕಾರ ಟೀಂ ಇಂಡಿಯಾದ ಹಿರಿಯ ಆಟಗಾರರೊಬ್ಬರು ರೋಹಿತ್ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರಂತೆ. ಇಂಗ್ಲೆಂಡ್ ಸರಣಿಗೆ ರೋಹಿತ್ ಬದಲಿಗೆ ತಾವೇ ನಾಯಕರಾಗಲು ಉತ್ಸಾಹ ತೋರುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಕಳೆದ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ನೀಡಿತ್ತು. ಹಾಗಂತ ಜಸ್ಪ್ರೀತ್ ಬುಮ್ರಾಗೆ ಪೂರ್ಣ ಪ್ರಮಾಣದಲ್ಲಿ ನಾಯಕತ್ವ ನೀಡಲು ಅವರ ಫಿಟ್ನೆಸ್ ಸಮಸ್ಯೆ ಅಡ್ಡಿಯಾಗಿದೆ. ಹೀಗಾಗಿ ಮತ್ತೊಬ್ಬ ಆಟಗಾರನಿಗೆ ನಾಯಕತ್ವ ನೀಡಿದರೂ ಅಚ್ಚರಿಯಿಲ್ಲ. ಹಾಗಿದ್ದರೆ ರೋಹಿತ್ ಸ್ಥಾನದ ಮೇಲೆ ಕಣ್ಣಿಟ್ಟಿರುವ ಹಿರಿಯ ಆಟಗಾರ ಯಾರಿರಬಹುದು ಎಂಬ ಕುತೂಹಲ ಈಗ ಎಲ್ಲರಲ್ಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ