ಆಸ್ಟ್ರೇಲಿಯಾ ಸರಣಿಗೆ ಅಭ್ಯಾಸ ಶುರು ಮಾಡಿದ ಟೀಂ ಇಂಡಿಯಾ

ಶನಿವಾರ, 4 ಫೆಬ್ರವರಿ 2023 (08:20 IST)
Photo Courtesy: Twitter
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಪ್ರತಿಷ್ಠಿತ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಕ್ರಿಕೆಟಿಗರು ಅಭ್ಯಾಸ ಶುರು ಮಾಡಿದ್ದಾರೆ.

ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಕ್ರಿಕೆಟಿಗರು ನಾಗ್ಪುರದಲ್ಲಿ ಕೋಚ್ ದ್ರಾವಿಡ್ ನೇತೃತ್ವದಲ್ಲಿ ವಿಶೇಷ ತರಬೇತಿ ಪಡೆಯಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಸೀಮಿತ ಓವರ್ ಗಳ ಸರಣಿಯಿಂದ ರೆಸ್ಟ್ ಪಡೆದಿದ್ದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಈಗಾಗಲೇ ಅಭ್ಯಾಸಕ್ಕೆ ಮರಳಿದ್ದಾರೆ. ಕೊಹ್ಲಿ ವರ್ಕೌಟ್ ಮಾಡುವ ವಿಡಿಯೋ ಪ್ರಕಟಿಸಿದ್ದು, ಮತ್ತೆ ಕಣಕ್ಕೆ ಮರಳಿರುವ ಸೂಚನೆ ನೀಡಿದ್ದಾರೆ. ರಾಹುಲ್ ಕೂಡಾ ನೆಟ್ ಪ್ರಾಕ್ಟೀಸ್ ನಡೆಸುತ್ತಿದ್ದಾರೆ. ಈ ಟೆಸ್ಟ್ ಸರಣಿ ಮುಂಬರುವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ದೃಷ್ಟಿಯಿಂದ ಭಾರತಕ್ಕೆ ಮಹತ್ವದ್ದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ