ಟೆಸ್ಟ್ ಚಾಂಪಿಯನ್ ಶಿಪ್ ಗೆ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಶುಕ್ರವಾರ, 11 ಜೂನ್ 2021 (10:06 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ ಆರಂಭಿಸಿದೆ.


ಕೊರೋನಾದಿಂದಾಗಿ ಕಳೆದ ಕೆಲವು ದಿನಗಳಿಂದ ಕ್ರಿಕೆಟ್ ನಿಂದ ದೂರವಿದ್ದ ಆಟಗಾರರು ಈಗ ಮೈದಾನದಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಇಂಗ್ಲೆಂಡ್ ನಲ್ಲಿ ಬಂದಿಳಿದ ಮೇಲೆ ಕ್ವಾರಂಟೈನ್ ಅವಧಿ ಮುಗಿಸಿ ಆಟಗಾರರು ಮೊದಲ ಅಭ್ಯಾಸ ನಡೆಸಿದ್ದಾರೆ.

ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ರಿಷಬ್ ಪಂತ್ ಬ್ಯಾಟಿಂಗ್ ಅಭ್ಯಾಸ ನಡೆಸಿದರೆ ಬೌಲರ್ ಗಳು ಬೌಲಿಂಗ್ ಅಭ್ಯಾಸ ನಡೆಸಿದ್ದಾರೆ. ಜೂನ್ 18 ರಿಂದ 22 ರವರೆಗೆ ಸೌಥಾಂಪ್ಟನ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಫೈನಲ್ ಪಂದ್ಯ ನಡೆಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ