ಇಂಗ್ಲೆಂಡ್ ಮೇಲೆ ಬೌಲರ್ ಗಳ ಬಳಿಕ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ಅಟ್ಯಾಕ್
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಭಾರತ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 21 ರನ್ ಗಳಿಸಿದೆ. ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ತಲಾ 9 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇಬ್ಬರೂ ತಾಳ್ಮೆಯ ಆಟವಾಡುತ್ತಿದ್ದು, ಇಂಗ್ಲೆಂಡ್ ವೇಗಿಗಳನ್ನು ಎಚ್ಚರಿಕೆಯಿಂದ ನಿಭಾಯಿಸುತ್ತಾ ಭದ್ರ ಬುನಾದಿ ಕಟ್ಟಿಕೊಡಲು ಪ್ರಯತ್ನ ನಡೆಸುತ್ತಿದ್ದಾರೆ.