ಭಾರತ-ಇಂಗ್ಲೆಂಡ್ ಅಂತಿಮ ಟೆಸ್ಟ್ ಇಂದಿನಿಂದ

ಶುಕ್ರವಾರ, 10 ಸೆಪ್ಟಂಬರ್ 2021 (08:45 IST)
ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ಇಂದಿನಿಂದ ಮ್ಯಾಂಚೆಸ್ಟರ್ ನಲ್ಲಿ ಆರಂಭವಾಗಲಿದೆ.


ಭಾರತ ಈಗಾಗಲೇ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿರುವುದರಿಂದ ಈ ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸರಣಿ ಕೈವಶ ವಾಗಲಿದೆ. ಆದರೆ ಅತ್ತ ಇಂಗ್ಲೆಂಡ್ ಗೆ ಸರಣಿ ಉಳಿಸಿಕೊಳ್ಳಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡವಿದೆ.

ಮೊದಲ ಪಂದ್ಯದಲ್ಲಿ ವೀರೋಚಿತವಾಗಿ ಗೆದ್ದ ಬಳಿಕ ಟೀಂ ಇಂಡಿಯಾ ಅದೇ ಉತ್ಸಾಹದಲ್ಲಿ ಇಂದೂ ಕಣಕ್ಕಿಳಿಯುತ್ತಿದೆ. ಇಂದಿನ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಅಪರಾಹ್ನ 3.30 ಕ್ಕೆ ಆರಂಭವಾಗಲಿದ್ದು, ಸೋನಿ ಸಿಕ್ಸ್ ನಲ್ಲಿ ನೇರಪ್ರಸಾರ ವೀಕ್ಷಿಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ