ಆಸ್ಟ್ರೇಲಿಯಾ ಸರಣಿಗೆ ಮೊದಲು ಟೀಂ ಇಂಡಿಯಾ ಕಠಿಣ ತರಬೇತಿ

ಬುಧವಾರ, 1 ಫೆಬ್ರವರಿ 2023 (08:40 IST)
ಮುಂಬೈ: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಭಾರತದ ಪಾಲಿಗೆ ಮಹತ್ವದ್ದಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಟೀಂ ಇಂಡಿಯಾ ಈ ಸರಣಿಯನ್ನು ಗೆಲ್ಲಲೇಬೇಕಾಗಿದೆ.

ಹೀಗಾಗಿ ಬಿಸಿಸಿಐ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದೆ. ಈ ಟೆಸ್ಟ್ ಸರಣಿಗೆ ಮೊದಲು ಟೀಂ ಇಂಡಿಯಾ ಆಟಗಾರರಿಗೆ ಕಠಿಣ ತರಬೇತಿ ಶಿಬಿರ ಆಯೋಜಿಸಲು ಮುಂದಾಗಿದೆ.

ನಾಗ್ಪುರದಲ್ಲಿ ಫೆಬ್ರವರಿ 9 ರಿಂದ ಮೊದಲ ಟೆಸ್ಟ್ ಆರಂಭವಾಗಲಿದೆ. ಇದೀಗ ಕೋಚ್ ರಾಹುಲ್ ದ್ರಾವಿಡ್ ನ್ಯೂಜಿಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಬ್ಯುಸಿಯಾಗಿದ್ದು ಇದಾದ ಬಳಿಕ ವಿಶೇಷ ತರಬೇತಿ ಶಿಬಿರದಲ್ಲಿ ಭಾಗಿಯಾಗಲಿದ್ದಾರೆ ಎಂಬ ಸುದ್ದಿಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ