ಏಷ್ಯಾ ಕಪ್ ನಲ್ಲಿ ಪಾಲ್ಗೊಳ್ಳಲು ಇಂದು ಟೀಂ ಇಂಡಿಯಾ ಲಂಕಾಗೆ ಪ್ರಯಾಣ

ಮಂಗಳವಾರ, 29 ಆಗಸ್ಟ್ 2023 (08:20 IST)
ಬೆಂಗಳೂರು: ಶ್ರೀಲಂಕಾದಲ್ಲಿ ನಡೆಯಲಿರುವ ಪ್ರತಿಷ್ಠಿತ ಏಷ್ಯಾ ಕಪ್ 2023 ರಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಇಂದು ದ್ವೀಪ ರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿದೆ.

ರೋಹಿತ್ ಶರ್ಮಾ ನೇತೃತ್ವದ 17 ಸದಸ್ಯರ ತಂಡ ಇಂದು ಲಂಕಾಗೆ ಪ್ರಯಾಣ ಬೆಳೆಸಲಿದೆ. ಆದರೆ ಇವರೊಂದಿಗೆ ಕೆಎಲ್ ರಾಹುಲ್ ಇಂದೇ ಪ್ರಯಾಣಿಸುವುದು ಅನುಮಾನವಾಗಿದೆ.

ಆಗಸ್ಟ್ 30 ರಿಂದ ಏಷ್ಯಾ ಕಪ್ ಆರಂಭವಾಗಲಿದೆ. ಆದರೆ ಭಾರತ ಮೊದಲ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ