ಐರ್ಲೆಂಡ್ ಸರಣಿಗೆ ಟೀಂ ಇಂಡಿಯಾಗೆ ಕೋಚ್ ಇಲ್ಲ!
ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಅವರ ಬದಲು ವಿವಿಎಸ್ ಲಕ್ಷ್ಮಣ್ ತಂಡದ ಕೋಚ್ ಆಗಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಅವರೂ ಕೂಡಾ ಐರ್ಲೆಂಡ್ ಪ್ರವಾಸ ಮಾಡುತ್ತಿಲ್ಲ.
ಹೀಗಾಗಿ ಮುಖ್ಯ ಕೋಚ್ ಇಲ್ಲದೇ ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಂ ಇಂಡಿಯಾ ಐರ್ಲೆಂಡ್ ನಲ್ಲಿ ಟಿ20 ಸರಣಿ ಆಡಲಿದೆ. ಕೋಚ್ ಸಿಬ್ಬಂದಿಗಳಾಗಿ ಎನ್ ಸಿಎ ತರಬೇತುದಾರರಾದ ಸಿತಾಂಶು ಕೊಟಕ್ ಮತ್ತು ಸಾಯಿರಾಜ್ ಬಹುತಲೆ ಕಾರ್ಯನಿರ್ವಹಿಸಲಿದ್ದಾರೆ ಎನ್ನಲಾಗಿದೆ.