ಆಸ್ಟ್ರೇಲಿಯಾದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಕಡ್ಡಾಯ ಕ್ವಾರಂಟೈನ್

ಬುಧವಾರ, 22 ಜುಲೈ 2020 (09:56 IST)
ಸಿಡ್ನಿ: ಈ ವರ್ಷದಂತ್ಯಕ್ಕೆ ಆಸ್ಟ್ರೇಲಿಯಾದಲ್ಲಿ ಕ್ರಿಕೆಟ್ ಸರಣಿ ಆಡಲು ಪ್ರವಾಸ ಮಾಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ಗೊಳಗಾಗಲೇಬೇಕಿದೆ.


ಕೊರೋನಾ ಭೀತಿ ಹಿನ್ನಲೆಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಈ ತೀರ್ಮಾನ ಮಾಡಿತ್ತು. ಆದರೆ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ 14 ದಿನದ ಬದಲಾಗಿ ಕಡಿಮೆ ಅವಧಿಯ ಕ್ವಾರಂಟೈನ್ ವಿಧಿಸುವಂತೆ ಮನವಿ ಮಾಡಿದ್ದರು.

ಆದರೆ ಗಂಗೂಲಿ ಮನವಿಯನ್ನು ತಿರಸ್ಕರಿಸಿರುವ ಕ್ರಿಕೆಟ್ ಆಸ್ಟ್ರೇಲಿಯಾ ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ಇರಲೇಬೇಕೆಂದು ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ