ಆಸ್ಟ್ರೇಲಿಯಾ ವಿರುದ್ಧ ಗೆದ್ದು ಇಂದು ಇತಿಹಾಸ ನಿರ್ಮಿಸುತ್ತಾ ಟೀಂ ಇಂಡಿಯಾ?

ಬುಧವಾರ, 27 ಸೆಪ್ಟಂಬರ್ 2023 (08:40 IST)
ರಾಜ್ ಕೋಟ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ರಾಜ್ ಕೋಟ್ ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯ ಗೆದ್ದು ಟೀಂ ಇಂಡಿಯಾ ಇತಿಹಾಸ ನಿರ್ಮಿಸುವ ತವಕದಲ್ಲಿದೆ.

ಭಾರತ ಈಗಾಗಲೇ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿ, ಸರಣಿ ಕೈವಶ ಮಾಡಿಕೊಂಡಿದೆ. ಒಂದು ವೇಳೆ ಇಂದಿನ ಪಂದ್ಯವನ್ನೂ ಗೆದ್ದರೆ ಟೀಂ ಇಂಡಿಯಾ ಹೊಸ ಇತಿಹಾಸ ನಿರ್ಮಿಸಲಿದೆ.

ಇಂದಿನ ಪಂದ್ಯ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿದರೆ ಭಾರತ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡ ದಾಖಲೆ ಮಾಡಲಿದೆ. ಸದ್ಯದ ಮಟ್ಟಿಗೆ ಟೀಂ ಇಂಡಿಯಾ ಫಾರ್ಮ್ ಗಮನಿಸಿದರೆ ಆ ದಾಖಲೆ ಕಷ್ಟವೇನಲ್ಲ ಎನ್ನಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ