ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್ ಮಾಡಲಿರುವ ಟೀಂ ಇಂಡಿಯಾ ಕ್ರಿಕೆಟಿಗರು

ಶುಕ್ರವಾರ, 8 ಮೇ 2020 (09:51 IST)
ಮುಂಬೈ: ಈ ವರ್ಷಾಂತ್ಯಕ್ಕೆ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಎರಡು ವಾರಗಳ ಕಡ್ಡಾಯ ಕ್ವಾರಂಟೈನ್ ಗೊಳಗಾಗಲಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.


ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಈ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಆದರೆ ಬಿಸಿಸಿಐ ಮೂಲಗಳ ಪ್ರಕಾರ ನೆಟ್ ಪ್ರಾಕ್ಟೀಸ್, ಇಂಡೋರ್ ಅಭ್ಯಾಸಕ್ಕೆ ಸೌಲಭ್ಯವುಳ್ಳ ಹೋಟೆಲ್ ಒಂದರಲ್ಲಿ ಭಾರತೀಯ ಕ್ರಿಕೆಟಿಗರು ಎರಡು ವಾರಗಳ ಕಾಲ ಕ್ವಾರಂಟೈನ್ ನಲ್ಲಿರಲಿದ್ದಾರೆ.

ನಿಯಮಗಳ ಪ್ರಕಾರ ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ತಂಡಗಳು ಕಡ್ಡಾಯವಾಗಿ ಕ್ವಾರಂಟೈನ್ ಗೊಳಗಾಲೇ ಬೇಕಿದೆ. ಅದೇ ರೀತಿ ಭಾರತ ತಂಡವೂ ನಿಯಮ ಪಾಲಿಸಲಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ