ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 38 ರನ್ ಗಳಿಂದ ಗೆಲುವು ಕಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಕ್ಕೆ ಪೃಥ್ವಿ ಶಾ ಮೊದಲ ಬಾಲ್ ನಲ್ಲೇ ಔಟಾಗಿ ನಿರಾಸೆ ಮೂಡಿಸಿದರು. ಆದರೆ ಬಳಿಕ ನಾಯಕ ಶಿಖರ್ ಧವನ್ ಉತ್ತಮವಾಗಿ ಬ್ಯಾಟಿಂಗ್ ಮಾಡಿ 46 ರನ್ ಗಳಿಸಿದರು. ಇವರಿಗೆ ತಕ್ಕ ಸಾಥ್ ನೀಡಿದ ಸೂರ್ಯಕುಮಾರ್ ಯಾದವ್ 34 ಎಸೆತಗಳಲ್ಲಿ 50 ರನ್ ಗಳಿಸಿದರು. ಇದರೊಂದಿಗೆ ಭಾರತ ಅಂತಿಮವಾಗಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗುರಿ ನಿಗದಿಪಡಿಸಿತು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಂಕಾ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಭಾರತದ ಪರ ಭುವನೇಶ್ವರ್ ಕುಮಾರ್ 3.3 ಓವರ್ ಗಳಲ್ಲಿ 4 ವಿಕೆಟ್ ಕಬಳಿಸಿದರೆ, ತಕ್ಕ ಸಾಥ್ ನೀಡಿದ ದೀಪಕ್ ಚಹರ್ 2 ವಿಕೆಟ್ ಗಳಿಸಿದರು. ಉಳಿದಂತೆ ಯಜುವೇಂದ್ರ ಚಾಹಲ್, ಕೃಣಾಲ್ ಪಾಂಡ್ಯ, ವರುಣ್ ಚಕ್ರವರ್ತಿ, ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಕಬಳಿಸಿದರು. ಅಂತಿಮವಾಗಿ ಲಂಕಾ 18.3 ಓವರ್ ಗಳಲ್ಲಿ 126 ರನ್ ಗಳಿಗೆ ಆಲೌಟ್ ಆಯಿತು.