ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ

ಶನಿವಾರ, 21 ಜನವರಿ 2023 (18:33 IST)
Photo Courtesy: Twitter
ರಾಯ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೇ ತನ್ನದಾಗಿಸಿಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಕೇವಲ 108 ರನ್ ಗಳಿಗೆ ಆಲೌಟ್ ಆಯಿತು. ಈ ಸುಲಭ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ, ಶುಬ್ನಂ ಗಿಲ್ ಮತ್ತೊಮ್ಮೆ ಉತ್ತಮ ಆರಂಭ ನೀಡಿದರು.

ರೋಹಿತ್ ಶರ್ಮಾ ಅರ್ಧಶತಕ ಗಳಿಸಿ ಮಿಂಚಿದರು. 50 ಎಸೆತ ಎದುರಿಸಿದ ಅವರು 51 ರನ್ ಗಳಿಸಿದ್ದಾಗ ಎಲ್ ಬಿ ಡಬ್ಲ್ಯು ಆಗಿ ಔಟಾದರು. ನಂತರ ಬಂದ ವಿರಾಟ್ ಕೊಹ್ಲಿ ಉತ್ತಮವಾಗಿ ಆಡಿದರೂ 11 ರನ್ ಗಳಿಸಿದ್ದಾಗ ಸ್ಟಂಪ್ ಔಟ್ ಆಗಿ ನಿರಾಸೆ ಅನುಭವಿಸಿದರು. ಆದರೆ ಮತ್ತೊಂದು ತುದಿಯಲ್ಲಿ ದೃಢವಾಗಿ ನಿಂತ ಶುಬ್ನಂ ಗಿಲ್ ಅಜೇಯ 40 ರನ್ ಗಳಿಸಿ ತಂಡಕ್ಕೆ ಗೆಲುವು ಕೊಡಿಸಿದರು. ಇಶಾನ್ ಕಿಶನ್ ಅಜೇಯ 8 ರನ್ ಗಳಿಸಿದರು. ಇದರೊಂದಿಗೆ ಟೀಂ ಇಂಡಿಯಾ 20.1 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 111 ರನ್ ಗಳಿಸಿ ಗೆಲುವು ಕಂಡಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ