ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಅಬ್ಬರಿಸಿದ ಟೀಂ ಇಂಡಿಯಾ

ಬುಧವಾರ, 9 ಆಗಸ್ಟ್ 2023 (08:20 IST)
Photo Courtesy: Twitter
ಗಯಾನ: ಸೂಕ್ತ ಸಮಯದಲ್ಲಿ ಸೂಕ್ತ ಆಟವಾಡಿದ ಟೀಂ ಇಂಡಿಯಾ ಕ್ರಿಕೆಟಿಗರು ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯ‍ನ್ನು ಜೀವಂತವಾಗಿಟ್ಟಿದ್ದಾರೆ. ಮೂರನೇ ಟಿ20 ಪಂದ್ಯವನ್ನು ಭಾರತ 7 ವಿಕೆಟ್ ಗಳಿಂದ ಗೆದ್ದುಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ನಿಕಲಸ್ ಪೂರನ್ ಆರಂಭದಲ್ಲೇ ಅಬ್ಬರಿಸಿದರೂ 20 ರನ್ ಗಳಿಸುವಷ್ಟರಲ್ಲಿ ಕುಲದೀಪ್ ಯಾದವ್ ಗೆ ವಿಕೆಟ್ ಒಪ್ಪಿಸಿದರು. ವಿಂಡೀಸ್ ಆರಂಭ ಎಂದಿನಂತೆ ಅಬ್ಬರದಿಂದ ಕೂಡಿತ್ತು. ಆದರೆ ಕುಲದೀಪ್ ಯಾದವ್ 3 ವಿಕೆಟ್ ಕಬಳಿಸಿ ಮಧ್ಯಮ ಕ್ರಮಾಂಕಕ್ಕೆ ಕಡಿವಾಣ ಹಾಕಿದರು. ಈ ನಡುವೆ ಬ್ರೆಂಡನ್ ಕಿಂಗ್ 42, ನಾಯಕ ರೊವ್ಮ್ಯಾನ್ ಪೊವೆಲ್ 19 ಎಸೆತಗಳಿಂದ ಅಜೇಯ 40 ರನ್ ಚಚ್ಚಿದರು.

ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ ಆರಂಭ ಉತ್ತಮವಾಗಿರಲಿಲ್ಲ. ಮೊದಲ ಬಾರಿಗೆ ಅವಕಾಶ ಪಡೆದ ಯಶಸ್ವಿ ಜೈಸ್ವಾಲ್ ಕೇವ 1 ರನ್ ಗಳಿಸಿದರೆ ಶುಬ್ಮನ್ ಗಿಲ್ 6 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್-ತಿಲಕ್ ವರ್ಮ ಜೋಡಿ ಭಾರತ ತಂಡವನ್ನು ಅಪಾಯದಿಂದ ಪಾರು ಮಾಡಿತು. ಸೂರ್ಯ ಕೇವಲ 44 ಎಸೆತಗಳಿಂಧ 4 ಸಿಕ್ಸರ್ ಸಹಿತ 83 ರನ್ ಗಳಿಸಿದರೆ ತಿಲಕ್ ವರ್ಮ ಅಜೇಯ 49 ರನ್ ಗಳಿಸಿ ಮತ್ತೊಮ್ಮೆ ತಮ್ಮ ಆಯ್ಕೆ ಸಮರ್ಥಿಸಿಕೊಂಡರು. ಬಳಿಕ ಬಂದ ಹಾರ್ದಿಕ್ ಪಾಂಡ್ಯ 20 ರನ್ ಗಳಿಸಿ ಗೆಲುವಿನ ಔಪಚಾರಿಕತೆ ಪೂರೈಸಿದರು. ಅಂತಿಮವಾಗಿ ಟೀಂ ಇಂಡಿಯಾ 17.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ