ಏಷ್ಯಾ ಕಪ್ ಕ್ರಿಕೆಟ್: ಟಾಸ್ ನಿಂದಲೇ ಶುಭಾರಂಭ ಮಾಡಿದ ಟೀಂ ಇಂಡಿಯಾ
ಭಾನುವಾರ, 28 ಆಗಸ್ಟ್ 2022 (19:06 IST)
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ಇಂದು ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ರೋಹಿತ್ ಶರ್ಮಾ ಟಾಸ್ ಗೆಲ್ಲುತ್ತಿದ್ದಂತೇ ಮೈದಾನದಲ್ಲಿದ್ದ ಪ್ರೇಕ್ಷಕರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಯಾಕೆಂದರೆ ಯುಎಇ ಅಂಗಳದಲ್ಲಿ ಟಾಸ್ ನಿರ್ಣಾಯಕ ಪಾತ್ರ ವಹಿಸುತ್ತದೆ.
ಅಚ್ಚರಿಯೆಂದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ರಿಷಬ್ ಪಂತ್ ರನ್ನು ಹೊರಗಿಟ್ಟು ದಿನೇಶ್ ಕಾರ್ತಿಕ್ ಗೆ ಅವಕಾಶ ನೀಡಿದೆ. ಅತ್ತ ಪಾಕಿಸ್ತಾನ ಮೂವರು ವೇಗಿಗಳು ಮತ್ತು ಇಬ್ಬರು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿಯುತ್ತಿದೆ. ನಸೀಮ್ ಶಾ ಮೊದಲ ಬಾರಿಗೆ ಅವಕಾಶ ಪಡೆದಿದ್ದಾರೆ.