ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆಎಲ್ ರಾಹುಲ್ ಅರ್ಧಶತಕ (51) ಮತ್ತು ಕೆಳ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ತ್ವರಿತ 44 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಈ ಮೊತ್ತವನ್ನು ಬೆನ್ನತ್ತಿದ ಆಸೀಸ್ ಆರಂಭ ಉತ್ತಮವಾಗಿತ್ತು. ಮೊದಲ ವಿಕೆಟ್ ಗೆ 56 ರನ್ ಗಳಿಸಿದರೂ ಬಳಿಕ ದಾಳಿಗಿಳಿದ ಯಜುವೇಂದ್ರ ಚಾಹಲ್ ಮತ್ತು ಟಿ ನಟರಾಜನ್ ಎದುರಾಳಿಗಳನ್ನು ಸಂಪೂರ್ಣವಾಗಿ ನಿಯಂತ್ರಿಸಿದರು. ನಿಯಮಿತವಾಗಿ ವಿಕೆಟ್ ಕೀಳುತ್ತಿದ್ದ ಈ ಜೋಡಿ ಆಸ್ಟ್ರೇಲಿಯಾವನ್ನು ಸಂಪೂರ್ಣವಾಗಿ ಕಟ್ಟಿ ಹಾಕಿದರು. ಅಂತಿಮವಾಗಿ ಆಸೀಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಬೌಲರ್ ಗಳು ಈ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು.