ವಿಂಡೀಸ್ ವಿರುದ್ಧ ಟೀಂ ಇಂಡಿಯಾ ದಿಗ್ವಿಜಯ

ಮಂಗಳವಾರ, 3 ಸೆಪ್ಟಂಬರ್ 2019 (09:12 IST)
ಜಮೈಕಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಟೆಸ್ಟ್ ಪಂದ್ಯವನ್ನು 257 ರನ್ ಗಳೊಂದಿಗೆ ಗೆಲ್ಲುವುದರೊಂದಿಗೆ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನೂ ತನ್ನದಾಗಿಸಿಕೊಂಡಿದೆ.


ನಿನ್ನೆ ನಾಲ್ಕನೇ ದಿನದಾಟದಲ್ಲಿ ವಿಂಡೀಸ್ 498 ರನ್ ಗಳ ಗೆಲುವಿನ ಗುರಿ ಬೆನ್ನತ್ತಿ 210 ಕ್ಕೆ ಆಲೌಟ್ ಆಯಿತು. ಇದರೊಂದಿಗೆ ಟೆಸ್ಟ್ ಚಾಂಪಿಯನ್ ಶಿಪ್ ನ ಮೊದಲ ಸರಣಿಯನ್ನು ಟೀಂ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಭಾರತದ ಪರ ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ ತಲಾ 3 ವಿಕೆಟ್, ಇಶಾಂತ್ ಶರ್ಮಾ 2 ವಿಕೆಟ್ ಮತ್ತು ಜಸ್ಪ್ರೀತ್ ಬುಮ್ರಾ 1 ವಿಕೆಟ್ ಕಬಳಿಸಿದರು. ವಿಂಡೀಸ್ ಪರ ಐವರು ಒಂದಂಕಿಗೆ ಔಟಾಗಿದ್ದರು.

ಇದರೊಂದಿಗೆ ಟೀಂ ಇಂಡಿಯಾ ಟಿ20, ಏಕದಿನ ಮತ್ತು ಟೆಸ್ಟ್ ಸರಣಿ ಮೂರನ್ನೂ ಗೆದ್ದುಕೊಂಡು, ಯಶಸ್ವಿಯಾಗಿ ಕೆರೆಬಿಯನ್‍ ಪ್ರವಾಸ ಮಾಡಿದಂತಾಗಿದೆ. ಎರಡೂ ಇನಿಂಗ್ಸ್ ಗಳಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ ಹನುಮ ವಿಹಾರಿ ಪಂದ್ಯ ಪುರುಷರಾದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ