ಮಾಜಿ ಅಂಪಾಯರ್ ಅಸದ್ ರೌಫ್ ನಿಧನ
66 ವರ್ಷದ ಅಸದ್ ರೌಫ್ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಕುಟುಂಬ ಮೂಲಗಳು ಖಚಿತಪಡಿಸಿವೆ. ಬುಧವಾರ ರಾತ್ರಿ ಅವರನ್ನು ಹೃದಯಾಘಾತದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ.
2000 ರಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅಂಪಾಯರ್ ಆಗಿ ಕಾರ್ಯನಿರ್ವಹಿಸಿದ್ದ ಅಸದ್ ರೌಫ್ ಇದುವರೆಗೆ ಒಟ್ಟು 64 ಟೆಸ್ಟ್ ಪಂದ್ಯಗಳಲ್ಲಿ ಅಂಪಾಯರ್ ಆಗಿ ಕೆಲಸ ಮಾಡಿದ್ದಾರೆ. ಅವರ ನಿಧನಕ್ಕೆ ಕ್ರಿಕೆಟ್ ಲೋಕ ಕಂಬನಿ ಮಿಡಿದಿದೆ.