ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗರ ಹಾಲಿಡೇ ಮೋಜು

ಶುಕ್ರವಾರ, 22 ಜುಲೈ 2022 (08:20 IST)
ಮುಂಬೈ: ವೆಸ್ಟ್ ಇಂಡೀಸ್ ಸರಣಿಯಿಂದ ಹೊರಗುಳಿದಿರುವ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗರು ಈಗ ಪ್ರವಾಸ ಮಾಡುತ್ತಿದ್ದಾರೆ.

ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ, ಮಗಳು ವಮಿಕಾ ಜೊತೆ ಪ್ಯಾರಿಸ್ ಗೆ ತೆರಳಿದ್ದಾರೆ. ಇಂಗ್ಲೆಂಡ್ ಸರಣಿಗೆ ಮೊದಲು ಪತ್ನಿ ಜೊತೆ ಮಾಲ್ಡೀವ್ಸ್ ಗೆ ತೆರಳಿದ್ದ ಕೊಹ್ಲಿ ಈಗ ಪ್ಯಾರಿಸ್ ಪ್ರಯಾಣದಲ್ಲಿದ್ದಾರೆ.

ಇನ್ನು, ನಾಯಕ ರೋಹಿತ್ ಶರ್ಮಾ ಪತ್ನಿ ರಿತಿಕಾ, ಪುತ್ರಿ ಜೊತೆ ಲಂಡನ್ ನಲ್ಲಿಯೇ ಉಳಿದುಕೊಂಡಿದ್ದಾರೆ. ಟಿ20 ಸರಣಿ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗ್ರೀಸ್ ನಲ್ಲಿ, ಜಸ್ಪ್ರೀತ್ ಬುಮ್ರಾ ಕೂಡಾ ಪ್ರವಾಸದಲ್ಲಿದ್ದಾರೆ. ಟೀಂ ಇಂಡಿಯಾದಿಂದ ಸಿಕ್ಕ ಬಿಡುವಿನ ವೇಳೆಯನ್ನು ಕ್ರಿಕೆಟಿಗರು ಚೆನ್ನಾಗಿಯೇ ಎಂಜಾಯ್ ಮಾಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ