ದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಆರಂಭಿಕ ಆಘಾತ ಕಂಡಿದೆ.
ಟಾಸ್ ಗೆದ್ದು ಕರ್ನಾಟಕಕ್ಕೆ ಮೊದಲು ಬ್ಯಾಟಿಂಗ್ ಅವಕಾಶ ನೀಡಿದ ಸೌರಾಷ್ಟ್ರ ಆರಂಭದಲ್ಲೇ ಎರಡು ವಿಕೆಟ್ ಕಿತ್ತಿದೆ. ಇತ್ತೀಚೆಗಿನ ವರದಿ ಬಂದಾಗ ಕರ್ನಾಟಕ 5 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಕೇವಲ 17 ರನ್ ಗಳಿಸಿದೆ.
ರವಿಕಾಂತ್ ಸಮರ್ಥ್ 4 ಮತ್ತು ಮಯಾಂಕ್ ಅಗರ್ವಾಲ್ 13 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ನಾಯಕ ಕರುಣ್ ನಾಯರ್ ಮತ್ತು ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾಗಿದ್ದಾರೆ. ರಾಹುಲ್ ದುರಾದೃಷ್ಟವಶಾತ್ ರನೌಟ್ ಆದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ