ಟೀಂ ಇಂಡಿಯಾ ಕೋಚ್ ಹುದ್ದೆಗೆ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋಡ್ ಅರ್ಜಿ?

ಸೋಮವಾರ, 18 ಅಕ್ಟೋಬರ್ 2021 (11:13 IST)
ಮುಂಬೈ: ಬಿಸಿಸಿಐ ಈಗ ಟೀಂ ಇಂಡಿಯಾ ಮುಖ್ಯ ಕೋಚ್ ಮತ್ತು ಇತರ ಸಹಾಯಕ ಸಿಬ್ಬಂದಿಗಳಿಗಾಗಿ ಅರ್ಜಿ ಆಹ್ವಾನಿಸಿದೆ. ಮಾಜಿ ನಾಯಕ ರಾಹುಲ್ ದ್ರಾವಿಡ್ ಹೆಸರು ಮುಖ್ಯ ಕೋಚ್ ಸ್ಥಾನಕ್ಕೆ ಬಲವಾಗಿ ಕೇಳಿಬರುತ್ತಿದೆ.


ಹಾಗಿದ್ದರೂ ಹಾಲಿ ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿರುವ ವಿಕ್ರಮ್ ರಾಥೋಡ್ ಕೂಡಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಹಾಕಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈಗ ರವಿಶಾಸ್ತ್ರಿಗೆ ಸಹಾಯಕರಾಗಿ ಬ್ಯಾಟಿಂಗ್ ಕೋಚ್ ಆಗಿರುವ ವಿಕ್ರಮ್ ರಾಥೋಡ್ ಮತ್ತೆ ಟೀಂ ಇಂಡಿಯಾದಲ್ಲಿ ಮುಂದುವರಿಯಲು ಬಯಸಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ 26 ರವರೆಗೆ ಅರ್ಜಿ ಹಾಕಲು ಅವಕಾಶವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ