ಈ ವರ್ಷದ ಡಿಸೆಂಬರ್ ಎರಡನೇ ವಾರದಲ್ಲಿ ಪ್ರೇಮ ಹಕ್ಕಿಗಳು ಅಂತಿಮವಾಗಿ ಸಪ್ತಪದಿ ತುಳಿಯಲು ನಿರ್ಧರಿಸಿವೆ. ಡಿಸೆಂಬರ್ 9, 10, 11 ಮತ್ತು 12 ದಿನಾಂಕಗಳನ್ನು ವಿವಾಹಕ್ಕಾಗಿ ಆಯ್ಕೆ ಮಾಡಲಾಗಿದೆ. ವಿರಾಟ್ ನಾಳೆ ಇಟಲಿಗೆ ಹೋಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಇಟಲಿಯ ಮಿಲನ್ ನಗರದಲ್ಲಿ ವಿರಾಟ್ ಮತ್ತು ಅನುಷ್ಕಾ ವಿವಾಹಕ್ಕಾಗಿ ಸ್ಥಳವನ್ನು ಬುಕ್ ಮಾಡಲಾಗಿದ್ದು, ವಿರಾಟ್ ಮತ್ತು ಅನುಷ್ಕಾ ಸ್ನೇಹಿತರು ಮಾತ್ರ ಉಪಸ್ಥಿತರಿರಲಿದ್ದಾರೆ. ಯಾವುದೇ ಕ್ರಿಕೆಟಿಗರಿಗೆ ಆಹ್ವಾನ ನೀಡಿಲ್ಲ. ಇದೊಂದು ಖಾಸಗಿ ಕಾರ್ಯಕ್ರಮವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಬಾಲಿವುಡ್ ನಟಿ ಅನುಷ್ಕಾ ಮ್ಯಾನೇಜರ್ ಪ್ರತಿಕ್ರಿಯೆ ನೀಡಿ, ಅಂತಹ ಯಾವುದೇ ವಿವಾಹ ಕಾರ್ಯಕ್ರಮದ ಬಗ್ಗೆ ಯೋಜನೆಯಿಲ್ಲ. ಆದರೆ, ಅನುಷ್ಕಾ ಮುಂದಿನ ವಾರ ಇಟಲಿಗೆ ತೆರಳಲಿದ್ದಾರೆ. ವಿವಾಹ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ತಿಳಿಸಿದ್ದಾರೆ.