ಲಂಡನ್ ನಲ್ಲಿ ಭಜನೆ ಕಾರ್ಯಕ್ರಮದಲ್ಲಿ ಕೊಹ್ಲಿ-ಅನುಷ್ಕಾ ದಂಪತಿ

ಶನಿವಾರ, 17 ಜೂನ್ 2023 (17:48 IST)
Photo Courtesy: Twitter
ಲಂಡನ್: ಇತ್ತೀಚೆಗೆ ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿ ದೇವಾಲಯಗಳಿಗೆ ಭೇಟಿ ಕೊಡುವುದು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದು ಸಾಮಾನ್ಯವಾಗಿಬಿಟ್ಟಿದೆ.

ಇತ್ತೀಚೆಗೆ ಮುಕ್ತಾಯವಾದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾಗಿಯಾಗಲು ಲಂಡನ್ ಗೆ ತೆರಳಿದ್ದ ಕೊಹ್ಲಿ ದಂಪತಿ ಈಗಲೂ ಅಲ್ಲಿಯೇ ರಿಲ್ಯಾಕ್ಸ್ ಮಾಡುತ್ತಿದ್ದಾರೆ.

ಲಂಡನ್ ನಲ್ಲಿಯೂ ಕೊಹ್ಲಿ ದಂಪತಿ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ. ಅಮೆರಿಕಾದ ಕೃಷ್ಣ ದಾಸ್ ಅವರ ಭಜನೆ ಕಾರ್ಯಕ್ರಮದಲ್ಲಿ ಕೊಹ್ಲಿ ದಂಪತಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ