ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ ಕೊಹ್ಲಿ, ಸಾಥ್ ನೀಡಿದ ಅನುಷ್ಕಾ
ವಿರಾಟ್ ಕೊಹ್ಲಿಗೆ ಪತ್ನಿ ಅನುಷ್ಕಾ ಶರ್ಮಾ ಕೂಡಾ ಸಾಥ್ ನೀಡಿದ್ದಾರೆ. ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಳಿಗ್ಗೆ ಇಬ್ಬರೂ ವಿಮಾನವೇರುವ ಮುನ್ನ ಪಪ್ಪಾರಾಜಿಗಳಿಗೆ ಪೋಸ್ ನೀಡಿದ್ದಾರೆ.
ಜೂನ್ 7 ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಭಾಗವಾಗಲು ಈಗಾಗಲೇ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಕೆಲವು ಆಟಗಾರರು ನಿನ್ನೆಯೇ ಇಂಗ್ಲೆಂಡ್ ಗೆ ತೆರಳಿದ್ದರು. ಇದೀಗ ವಿರಾಟ್ ದಂಪತಿ ಇಂಗ್ಲೆಂಡ್ ಗೆ ತೆರಳಿದ್ದಾರೆ.