ಸಚಿನ್ ತೆಂಡುಲ್ಕರ್ ಮೀರಿ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ

ಶುಕ್ರವಾರ, 31 ಆಗಸ್ಟ್ 2018 (17:33 IST)
ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದಲ್ಲಿ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.
 

ಇಂದು ಬ್ಯಾಟಿಂಗ್ ಮುಂದುವರಿಸಿರುವ ಭಾರತ ಭೋಜನ ವಿರಾಮದ ವೇಳೆಗೆ 2 ವಿಕೆಟ್ ನಷ್ಟಕ್ಕೆ 100 ರನ್ ಗಳಿಸಿದೆ. ಭಾರತದ ಪರ ನಾಯಕ ವಿರಾಟ್ ಕೊಹ್ಲಿ 25 ರನ್ ಮತ್ತು ಚೇತೇಶ್ವರ ಪೂಜಾರ 28 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ವಿರಾಟ್ ಕೊಹ್ಲಿ 9 ರನ್ ಗಳಿಸಿದಾಗ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ವೇಗದ 6000 ರನ್ ಪೂರೈಸಿದ ಎರಡನೇ ಆಟಗಾರ ಎಂಬ ದಾಖಲೆ ಮಾಡಿದ್ದಾರೆ. 119 ಪಂದ್ಯಗಳಿಂದ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 120 ಪಂದ್ಯಗಳಿಂದ 6000 ರನ್ ಪೂರೈಸಿದ್ದ ಸಚಿನ್ ತೆಂಡುಲ್ಕರ್ ಮೀರಿ ಕೊಹ್ಲಿ ಈಗ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಸುನಿಲ್ ಗವಾಸ್ಕರ್ 117 ಪಂದ್ಯಗಳಿಂದ ಈ ಸಾಧನೆ ಮಾಡಿ ಮೊದಲ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ