ಜಿಂಬಾಬ್ವೆ ಸರಣಿಗೆ ವಿರಾಟ್ ಕೊಹ್ಲಿಯನ್ನು ಡ್ರಾಪ್ ಮಾಡಿದ್ರಾ?
ಆದರೆ ಈ ತಂಡದಲ್ಲಿ ವಿರಾಟ್ ಕೊಹ್ಲಿಗೆ ಸ್ಥಾನ ನೀಡಲಾಗಿಲ್ಲ. ಇದರ ಬಗ್ಗೆ ನೆಟ್ಟಿಗರು ಸೋಷಿಯಲ್ ಮೀಡಿಯಾ ಮೂಲಕ ಕಾಮೆಂಟ್ ಮಾಡುತ್ತಿದ್ದಾರೆ.
ಕೊಹ್ಲಿ ಕಳಪೆ ಫಾರ್ಮ್ ನಿಂದಾಗಿ ಸತತ ಟೀಕೆಗೆ ಗುರಿಯಾಗಿದ್ದರು. ವೆಸ್ಟ್ ಇಂಡೀಸ್ ಸರಣಿಗೆ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಜಿಂಬಾಬ್ವೆ ಸರಣಿಯಿಂದಲೂ ಹೊರಗಿಟ್ಟಿರುವುದರಿಂದ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಆದರೆ ಅಸಲಿಗೆ ಅವರನ್ನು ತಂಡದಿಂದ ಕೈಬಿಟ್ಟಿರುವುದಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.