ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ

ಮಂಗಳವಾರ, 5 ಡಿಸೆಂಬರ್ 2023 (13:15 IST)
Photo Courtesy: Twitter
ಲಂಡನ್: ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಲಂಡನ್ ಪ್ರವಾಸದಲ್ಲಿದ್ದಾರೆ.

ವಿಶ್ವಕಪ್ ಸೋಲಿನ ಕಹಿ ಮರೆಯಲು ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಮತ್ತು ಮಗಳು ವಮಿಕಾ ಜೊತೆ ಲಂಡನ್ ಗೆ ತೆರಳಿದ್ದಾರೆ. ಇತ್ತೀಚೆಗೆ ಫ್ಯಾನ್ಸ್ ಜೊತೆಗೆ ಕೊಹ್ಲಿ ಸೆಲ್ಫೀಗೆ ಪೋಸ್ ಕೊಟ್ಟಿದ್ದು ವೈರಲ್ ಆಗಿತ್ತು.

ಇದೀಗ ವಿರಾಟ್ ಮತ್ತು ಅನುಷ್ಕಾ ಸಖತ್ ಸ್ಟೈಲಿಶ್ ಉಡುಗೆಯಲ್ಲಿ ಲಂಡನ್ ನ ರೆಸ್ಟೋರೆಂಟ್ ಒಂದರಲ್ಲಿರುವ ಫೋಟೋ ವೈರಲ್ ಆಗಿದೆ. ವಿಶೇಷವೆಂದರೆ ಕೊಹ್ಲಿ ಈ ಫೋಟೋದಲ್ಲಿ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

ಸದ್ಯಕ್ಕೆ ಟೀಂ ಇಂಡಿಯಾದಿಂದ ಬ್ರೇಕ್ ಪಡೆದಿರುವ ವಿರಾಟ್ ಕೊಹ್ಲಿ ಮುಂಬರುವ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ವೇಳೆ ಸಕ್ರಿಯ ಕ್ರಿಕೆಟ್ ಗೆ ಮರಳಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ