ಫೋರ್ಬ್ಸ್ ನ ಈ ಪಟ್ಟಯಲ್ಲಿ ವಿರಾಟ್ ಕೊಹ್ಲಿಗೆ ಮಾತ್ರ ಸ್ಥಾನ!

ಗುರುವಾರ, 7 ಜೂನ್ 2018 (08:51 IST)
ಮುಂಬೈ: ಫೋರ್ಬ್ಸ್ ಇತ್ತೀಚೆಗೆ ಬಿಡುಗಡೆಗೊಳಿಸಿದ ಟಾಪ್ 100 ಶ್ರೀಮಂತ ಕ್ರೀಡಾಳುಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕೈಕ ಭಾರತೀಯನಾಗಿ ಸ್ಥಾನ ಗಳಿಸಿದ್ದಾರೆ.

ಈ ಪಟ್ಟಿಯಲ್ಲಿ ಅಮೆರಿಕಾದ ಬಾಕ್ಸಿಂಗ್ ಚಾಂಪಿಯನ್ ಫ್ಲಾಯ್ಡ್ ಮೇವೆದರ್ ಮೊದಲ ಸ್ಥಾನ ಗಳಿಸಿದ್ದಾರೆ. ಅವರ ವಾರ್ಷಿಕ ಗಳಿಕೆ 285 ಅಮೆರಿಕನ್ ಮಿಲಿಯನ್ ಡಾಲರ್ ಆಗಿದೆ.

ಆದರೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಏಕೈಕ ಭಾರತೀಯ ವಿರಾಟ್ ಕೊಹ್ಲಿ ಪ್ರತೀ ವರ್ಷಕ್ಕೆ 24 ಅಮೆರಿಕನ್ ಮಿಲಿಯನ್ ಡಾಲರ್ ಗಳಿಕೆ ಮಾಡುತ್ತಿದ್ದು, 83 ನೇ ಸ್ಥಾನದಲ್ಲಿದ್ದಾರೆ. ವಿಶೇಷವೆಂದರೆ ಈ ಪಟ್ಟಿಯಲ್ಲಿ ಒಬ್ಬನೇ ಒಬ್ಬ ಮಹಿಳಾ ಕ್ರೀಡಾಳು ಸ್ಥಾನ ಪಡೆದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ