ಕೊನೆಗೂ ಟೀಂ ಇಂಡಿಯಾಗೆ ಕೈ ಕೊಡಲು ರೆಡಿಯಾದ್ರು ವಿರಾಟ್ ಕೊಹ್ಲಿ!

ಶುಕ್ರವಾರ, 4 ಮೇ 2018 (09:44 IST)
ನವದೆಹಲಿ: ಟೀಂ ಇಂಡಿಯಾ ಮತ್ತು ಅಫ್ಘಾನಿಸ್ತಾನ ನಡುವೆ ಬೆಂಗಳೂರಿನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯವನ್ನು ವಿರಾಟ್ ಕೊಹ್ಲಿ ಮಿಸ್ ಮಾಡಿಕೊಳ್ಳಲಿದ್ದಾರೆ. ಇದರ ಬದಲು ಇಂಗ್ಲೆಂಡ್ ಗೆ ಹಾರಲಿದ್ದಾರೆ.

ಜೂನ್ ತಿಂಗಳಲ್ಲಿ ನಡೆಯಲಿರುವ ಈ ಟೆಸ್ಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಇಂಗ್ಲೆಂಡ್ ನಲ್ಲಿ ಕೌಂಟಿ ಕ್ರಿಕೆಟ್ ಆಡಲಿದ್ದಾರೆ. ಸರ್ರೆ ತಂಡದ ಪರ ಕೊಹ್ಲಿ ಒಂದು ತಿಂಗಳ ಒಪ್ಪಂದಕ್ಕೆ ಸಹಿ ಹಾಕಿರುವುದು ಪಕ್ಕಾ ಆಗಿದೆ.

ಈ ಮೂಲಕ ಕೊಹ್ಲಿ ಕೌಂಟಿ ಆಡುತ್ತಾರೆ, ಇಲ್ಲ ಎಂಬ ಗೊಂದಲಕ್ಕೆ ತೆರೆ ಬಿದ್ದಿದೆ. ಈ ಬಗ್ಗೆ ಸ್ವತಃ ಕೊಹ್ಲಿ ಸರ್ರೆ ತಂಡದ ವೆಬ್ ಸೈಟ್ ನಲ್ಲಿ ಹೇಳಿಕೊಂಡಿದ್ದಾರೆ. ಕೌಂಟಿ ಆಡುವುದು ತಮ್ಮ ಕನಸಾಗಿತ್ತು. ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ