ಬ್ರೇಕ್ ಪಡೆಯುವ ಮುನ್ನ ದ್ರಾವಿಡ್ ಸಲಹೆ ಪಡೆಯಲಿರುವ ವಿರಾಟ್ ಕೊಹ್ಲಿ
ಸತತ ಕ್ರಿಕೆಟ್ ನಿಂದ ಬಳಲಿರುವ ಕೊಹ್ಲಿಗೆ ರನ್ ಗಳಿಸಲೂ ಕಷ್ಟವಾಗುತ್ತಿದೆ. ಇದರಿಂದ ಅವರು ಟೀಕೆಗೊಳಗಾಗುತ್ತಿದ್ದಾರೆ. ಹೀಗಾಗಿ ಅವರು ದ.ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂಬ ಮಾತುಗಳಿತ್ತು.
ವಿಶ್ರಾಂತಿ ತೆಗೆದುಕೊಳ್ಳುವ ಮೊದಲು ತಂಡದ ಹಿತಾಸಕ್ತಿ ಗಮನಿಸಬೇಕಾಗುತ್ತದೆ. ಹೀಗಾಗಿ ವಿಶ್ರಾಂತಿಗೆ ಮುನ್ನ ರಾಹುಲ್ ಭಾಯಿ, ಮತ್ತು ಟೀಂ ಮ್ಯಾನೇಜ್ ಮೆಂಟ್ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಮಾಡುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.