ಟಿ20 ಶ್ರೇಯಾಂಕದಲ್ಲಿ ಬಡ್ತಿ ಪಡೆದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ

ಗುರುವಾರ, 25 ಮಾರ್ಚ್ 2021 (10:12 IST)
ದುಬೈ: ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಐಸಿಸಿ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.


ಐಸಿಸಿ ಟಿ20 ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಸ್ಥಾನ ಏರಿಕೆ ಕಂಡಿದ್ದು ಐದನೇ ಸ್ಥಾನಕ್ಕೇರಿದ್ದಾರೆ. ಕೆಎಲ್ ರಾಹುಲ್ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್ ಶರ್ಮಾ ಕೂಡಾ ಮೂರು ಸ್ಥಾನ ಮೇಲೇರಿ 14 ನೇ ಸ್ಥಾನ ಗಳಿಸಿದ್ದಾರೆ.

ಟೀಂ ಇಂಡಿಯಾ ಕ್ರಿಕೆಟಿಗರ ಪೈಕಿ ಅಗ್ರ ಸ್ಥಾನ ವಿರಾಟ್ ಕೊಹ್ಲಿಗೆ. ನಂ.1 ಸ್ಥಾನದಲ್ಲಿ ಇಂಗ್ಲೆಂಡ್ ನ ಡೇವಿಡ್ ಮಲನ್ ಇದ್ದಾರೆ. ಏಕದಿನ ಪಂದ್ಯಗಳ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ನಂ.1 ಆಗಿದ್ದರೆ, ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ