ಟಾಸ್ ಗೆದ್ದ ವಿಂಡೀಸ್, ಕೊಹ್ಲಿಗೆ ಕೈ ತಪ್ಪಿದ ದಾಖಲೆ

ಗುರುವಾರ, 1 ನವೆಂಬರ್ 2018 (13:32 IST)
ತಿರುವನಂತಪುರಂ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಅಂತಿಮ ಮತ್ತು ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ.

ಈಗಾಗಲೇ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸರಣಿ ಗೆಲ್ಲುವ ಉತ್ಸಾಹದಲ್ಲಿದೆ. ಅತ್ತ ವಿಂಡೀಸ್ ಗೆ ಸರಣಿ ಸಮಬಲಗೊಳಿಸಲು ಈ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.

ಈ ಪಂದ್ಯಕ್ಕೆ ಭಾರತ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ