ಭಾರತ-ವಿಂಡೀಸ್ ಏಕದಿನ: ಟಾಸ್ ಗೆದ್ದ ವೆಸ್ಟ್ ಇಂಡೀಸ್

ಭಾನುವಾರ, 24 ಜುಲೈ 2022 (18:37 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಕಳೆದ ಪಂದ್ಯದಲ್ಲೂ ಎರಡೂ ತಂಡಗಳು 300 ಪ್ಲಸ್ ರನ್ ಗಳಿಸಿದ್ದವು. ಕೊನೆಗೆ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ ಗೆದ್ದುಕೊಂಡಿತ್ತು.

ಈ ಪಂದ್ಯದ ಮೂಲಕ ನಿರೀಕ್ಷೆಯಂತೇ ವೇಗಿ ಆವೇಶ್ ಖಾನ್ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.  ಪ್ರಸಿದ್ಧ ಕೃಷ್ಣ ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ವಿಂಡೀಸ್ ಹೇಡನ್ ವಾಲ್ಷ್ ರನ್ನು ಆಡುವ ಬಳಗದಲ್ಲಿ ಸೇರಿಸಿಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ